ಬೆಂಗಳೂರು: ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ ಇಂದು ಪ್ರಶ್ನಿಸಿದ್ದಾರೆ.
ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಸಲಹೆ ನೀಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾ 13ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಮತಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು? ಸೋತವರು ಯಾರು? ಎಂದು ಪ್ರಶ್ನಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದು ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ನಿಮ್ಮ ಪಕ್ಷ ಕುಸಿಯುವುದನ್ನು ತಪ್ಪಿಸಲು ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ನಿಮಗೆ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ, ಆ ಮೇಲೆ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.




