ನೌಕರರ ಹೋರಾಟಕ್ಕೆ ಸಂದ ಜಯ
ನವಂಬರ್ ನಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ
ಬೆಂಗಳೂರು: ನಗರದ ಕುಮಾರಕೃಪಾದಲ್ಲಿ ಉಪ ಮುಖ್ಯಮಂತ್ರಿ, ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಬೇಡಿಕೆ, ಕುಂದೂಕೂರತೆ ಕುರಿತು ಮಹತ್ವವಾದ ಚರ್ಚೆ ನಡೆಸಲಾಯಿತು.
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್, ಉಪ ಆಯುಕ್ತ ಮಂಜುನಾಥ್ ಸ್ವಾಮಿ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಭಾಗವಹಿಸಿದ್ದರು.
ವೃಂದ ಮತ್ತು ನೇಮಕಾತಿ ನಿಯಾಮವಳಿ ಕುರಿತು ಮುಂಬಡ್ತಿ ವಿಚಾರ, ಕಾನೂನುಬಾಹಿರವಾಗಿ ಎರವಲು ಸೇವೆ ಅಧಿಕಾರಿಗಳ ವರ್ಗಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ದಿನಾಚರಣೆ, ಬಿಬಿಎಂಪಿಯಲ್ಲಿ 6,414 ಖಾಲಿ ಹುದ್ದೆಗಳ ಭರ್ತಿ ಕ್ರಮ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಮೊದಲಾದ ಹತ್ತು ಬೇಡಿಕೆಗಳಿಗೆ ಉಪಮುಖ್ಯಮಂತ್ರಿ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್
ಜೊತೆಗೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಅಧಿಕಾರಿಗಳಾದ ರಾಕೇಶ್ ಸಿಂಗ್, ತುಷಾರ್ ಗಿರಿನಾಥ್, ಹರೀಶ್ ಕುಮಾರ್, ಮಂಜುನಾಥ್ ಸ್ವಾಮಿರವರಿಗೆ ಸಂಘದ ವತಿಯಿಂದ ಹೃತ್ವೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.




