ಆರೋಗ್ಯ ಸಚಿವರ ಮೇಲೆ ದಾಳಿ: ಸಬ್ ಇನ್ಸ್ಪೆಕ್ಟರ್ ವಶಕ್ಕೆ ಪಡೆದು ತನಿಖೆ

3 years ago

ಭುವನೇಶ್ವರ: ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರು ಬ್ರಜರಾಜ ನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ವಾಹನದಿಂದ ಹೊರಬಂದಾಗ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇಂದು ಮುಂಜಾನೆ ಜಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದಾರೆ.

ನಬಾ ಕಿಶೋರ್ ದಾಸ್ ಅವರು ಬ್ರಜರಾಜನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತಮ್ಮ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಸಬ್-ಇನ್‌ಸ್ಪೆಕ್ಟರ್ ಅವರ ಮೇಲೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ವೇಳೆ ಗಾಯಗೊಂಡ ಅವರನ್ನು ಸ್ಥಳೀಯರು ಕಾರಿನಲ್ಲಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿರುವೆ ವೇಳೆಯಲ್ಲಿ ಎದೆಯಿಂದ ರಕ್ತಸ್ರಾವವಾಗುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ, ಅವರನ್ನು ಸ್ವಾಗತಿಸಲು ಅಪಾರ ಜನ ಜಮಾಯಿಸಿದರು. ಇದ್ದಕ್ಕಿದ್ದಂತೆ, ಗುಂಡು ಸಿಡಿದ ಶಬ್ದ ಕೇಳಿಬಂದವು ಮತ್ತು ಕಿಶೋರ್ ದಾಸ್ ಅವರ ಮೇಲೆ ಗುಂಡು ಹಾರಿಸಿ ಒಬ್ಬ ಪೋಲೀಸ್ ಓಡಿಹೋಗುತ್ತಿರುವುದ ದೃಶ್ಯ ಕಂಡುಬಂದಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಕಿಶೋರ್ ದಾಸ್ ಅವರನ್ನು ನಂತರ ಭುವನೇಶ್ವರದ ಆಸ್ಪತ್ರೆಗೆ ವಿಮಾನದಲ್ಲಿ ಸಾಗಿಸಲಾಯಿತು ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿವರ ಮೇಲೆ ಗುಂಡು ಹಾರಿಸಿದ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ದಾಸ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ನಬಾ ಕಿಶೋರ್ ದಾಸ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕ್ರೈಂ ಬ್ರಾಂಚ್‌ಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

Leave a Reply