ಬಳ್ಳಾರಿ: ಕಾರ್ಮಿಕ ಇಲಾಖೆ ವತಿಯಿಂದ ಬಳ್ಳಾರಿ ನಗರದ ಸುಧಾಕ್ರಾಸ್, ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಐಸ್ಕ್ರೀಮ್ ಪಾರ್ಲರ್, ಮಟನ್ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ ನಾಲ್ವರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ತಿಳಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ಪಾನ್-ಇಂಡಿಯಾ ರೆಸ್ಕ್ಯೂ ಅಂಡ್ ರಿಹಾಬಿಲೇಷನ್ ಕ್ಯಾಂಪೇನ್ ಅಂಗವಾಗಿ ಟಾಸ್ಕ್ಫೋರ್ಸ್ ಸಮಿತಿ ರಚಿಸಿ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರ ರಕ್ಷಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಬಳ್ಳಾರಿ ತಾಲ್ಲೂಕು ಗ್ರೇಡ್-2 ತಹಶೀಲ್ದಾರ ಮಂಜುನಾಥ ಅವರ ನೇತೃತ್ವದ ತಾಲ್ಲೂಕು ಟಾಸ್ಕ್ಫೋರ್ಸ್ ಸಮಿತಿಯ ಅಧಿಕಾರಿಗಳ ತಂಡದೊಂದಿಗೆ ಸಭೆ ನಡೆಸಿ, ಆಕಸ್ಮಿಕ ದಾಳಿ ಮಾಡಲಾಗಿದ್ದು, ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ. ನಂತರ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿ ಸಂಬಂಧಿಸಿದ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986ರ ತಿದ್ದುಪಡಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ವೇಳೆ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಹಿರಿಯ ಕಾರ್ಖಾನೆ ನಿರೀಕ್ಷಕ ವರುಣ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ನರಸಪ್ಪ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಭಾಷಾ, ಮಕ್ಕಳ ಸಹಾಯವಾಣಿ ಮತ್ತು ಚೈಲ್ಡ್ ಲೈನ್ ಸಿಬ್ಬಂದಿ ಚಂದ್ರಕಲ, ನಿಲೋಫಿಯಾ, ರಿಚ್ ಸ್ವಯಂಸೇವಾ ಸಂಸ್ಥೆ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.


