ಬಳ್ಳಾರಿ: ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಸಿರುಗುಪ್ಪ ಪಟ್ಟಣದ ಆದೋನಿ ರೋಡ್, ದೇಶನೂರು ರಸ್ತೆ, ಸಿಂಧನೂರು ರಸ್ತೆ, ಬಳ್ಳಾರಿ ರಸ್ತೆ ಮತ್ತು ಇತರೆ ಸ್ಥಳಗಳಲ್ಲಿ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಇತ್ಯಾದಿ ಉದ್ದಿಮೆಗಳ ಮೇಲೆ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರಡಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಅಧಿಕಾರಿಗಳ ತಂಡದೊಂದಿಗೆ ದಾಳಿ ನಡೆಸಲಾಗಿದೆ.
ಒಟ್ಟು 03 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಶಿಕ್ಷಣ ಇಲಾಖೆಗೆ ಒಪ್ಪಿಸಿ ಸಂಬಂಧಿಸಿದ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಮತ್ತು ಪೋಸ್ಟರ್ ನೀಡಿ ಜಾಗೃತಿ ಮೂಡಿಸಲಾಯಿತು. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರ ವಿಶ್ವನಾಥ್, ಶಿಕ್ಷಣ ಇಲಾಖೆಯ ಸುರೇಶ್, ಕಂದಾಯ ನಿರೀಕ್ಷಕ ಬಿ.ಟಿ. ಮಂಜುನಾಥ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಆನಂದ್ ಉಪಸ್ಥಿತರಿದ್ದರು.



