ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ ಎಂದು ಬಿಜೆಪಿ ಆರೋಪಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಬೆಂಕಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ? ಎಂದು ಪ್ರಶ್ನಿಸಿದೆ.




