ಮಂಗಳೂರು: ರಾಜ್ಯದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿ ಪಕ್ಷದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಅವರು ಒಮ್ಮೆಯೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ದನಿ ಎತ್ತಿಲ್ಲ ಎಂದು ಆರೋಪಿಸಿ ಅವರ ಮಂಗಳೂರು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಎನ್.ಎಸ್.ಯು.ಐ ಕಾರ್ಯಕರ್ತರು ಸಂಸದ ಕಟೀಲ್ ವಿರುದ್ಧ ಘೋಷಣೆಗಳನ್ನು ಮೊಳಗಿಸಿ, ಅವರ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.


