ಬೆಂಗಳೂರು: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೆಲವೆಡೆ ಕನ್ನಡಿಗರ ಆಸ್ತಿ- ಪಾಸ್ತಿ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರರು ಮಹಾರಾಷ್ಟ್ರ ಬ್ಯಾಂಕ್‍ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕನ್ನಡಿಗರ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅಲ್ಲಿನ ಪೊಲೀಸರು ಇವರ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ಕರ್ನಾಟಕ ಸೇನೆ ನೇತೃತ್ವದಲ್ಲಿ ಒಗ್ಗೂಡಿದ ಕಾರ್ಯಕರ್ತರು ಗಾಂಧಿನಗರದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರಗೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಬ್ಯಾಂಕ್‍ಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬ್ಯಾಂಕ್‍ಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.




