ಬೆಂಗಳೂರು: ಎಪ್ರಿಲ್ ೧೬ರಂದು ಭಾನುವಾರ ಬೆಳಗ್ಗೆ ೧೧-೦೦ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ʻಕನ್ನಡ ಪ್ರವೇಶ, ಕಾವ, ಜಾಣ, ರತ್ನ ಹಾಗೂ ಶಾಸನಶಾಸ್ತ್ರ ಡಿಪ್ಲೋಮಾʼ ಉತ್ತಮ ಸಾಧನೆ ಗೈದವರಿಗೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಪಿಎಚ್ಡಿ ಪದವಿ ಪಡೆದವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.
ತುಮಕೂರಿನ ಶ್ರೀ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ವೀರೆಶಾನಂದ ಸರಸ್ವತೀ ಅವರು ಕಾರ್ಯಕ್ರಮ ಉದ್ಘಾಟಿಸಿ ಪುರಸ್ಕಾರ ನೀಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.




