ಬಳ್ಳಾರಿ: ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ ಸೌಲಭ್ಯಗಳ ಕುರಿತು ಅರಿವು ಹೊಂದಬೇಕು ಎಂದು ಲೀಡ್ ಬ್ಯಾಂಕ್‌ನ ಜಿಲ್ಲಾ ಮುಖ್ಯ ವ್ಯವಸ್ಥಾಪಕರು ಹಾಗೂ ಶಾಖಾ ವ್ಯವಸ್ಥಾಪಕ ಗಿರೀಶ್ ವಿ.ಕುಲಕರ್ಣಿ ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವತಿಯಿಂದ ಆರ್‌ಎಎಂಪಿ ಯೋಜನೆಯಡಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು ಯೋಜನೆ ಕುರಿತು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೆಎಸ್‌ಎಫ್‌ಸಿಯ ಡಾ.ಚಂದ್ರಪ್ಪ ಎಂ.ಎಸ್ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು ಕುರಿತು ಮಾತನಾಡಿದರು.
ಕಾರ್ಯಾಗಾರದಲ್ಲಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು (ಬಿ.ಡಿ.ಎಸ್.ಪಿ) ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಉಪನಿರ್ದೇಶಕ ಬಿ.ಜಿ.ರಂಗನಾಥ್, ಸಿ.ಬಿ. ಆರ್ಸೆಟ್ ನಿರ್ದೇಶಕ ರಾಜಾಸಾಬ್ ಹೆಚ್.ಇ., ಸಂಪನ್ಮೂಲ ವ್ಯಕ್ತಿ ಪ್ರಸನ್ನ, ಸಿಡಾಕ್ ತರಬೇತಿ ಅಧಿಕಾರಿ ವಿನೋದ್ ಕುಮಾರ್, ಆರ್‌ಸೆಟ್‌ಇ ತರಬೇತಿ ಅಧಿಕಾರಿ ಜಡೇಪ್ಪ ಸೇರಿದಂತೆ ಉದ್ದಿಮೆದಾರರು ಹಾಜರಿದ್ದರು.




