ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ದಾವಣಗೆರೆ: ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ ನೀಡಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅರಿವು ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಹಮ್ಮಿಕೊಂಡು ವರದಿ ನೀಡಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿಯೂ ಕಾರ್ಮಿಕರ ಮಕ್ಕಳು ಬಾಲ್ಯ ವಿವಾಹಕ್ಕೊಳಗಾಗುತ್ತಿರುವುದರಿಂದ ಕಾರ್ಮಿಕರಿಗೆ ಅರಿವು ಕಾರ್ಯಕ್ರಮ ಏರ್ಪಡಿಸಲು ತಿಳಿಸಿದರು.
ತಾಂಡಾಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಲ್ಲಿ ಮತ್ತು ಹಿಂದುಳಿದ ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬುಡಕಟ್ಟು ಕಲ್ಯಾಣ ಇಲಾಖೆಗಳು ಈ ಸಮುದಾಯದ ಜನರು ವಾಸಿಸುವ ಪ್ರದೇಶಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಹ ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದರು.
ಬಾಲ್ಯವಿವಾಹ ನಡೆಯದೇ ಇರುವ ಮತ್ತು ಹದಿಹರೆಯದ ಬಾಲಕಿಯರು ಗರ್ಭಿಣಿ ಪ್ರಕರಣ ವರದಿ ಆಗದೆ ಇರುವಂತಹ ಪಂಚಾಯಿತಿಗಳನ್ನು ಗಮನದಲ್ಲಿ ಇಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ಸಭೆಗೆ ಮಾಹಿತಿ ನೀಡಿ ಏಪ್ರಿಲ್-2024 ಮತ್ತು ಮೇ-2024ರ ತಿಂಗಳಲ್ಲಿ ಒಟ್ಟು 26 ಬಾಲ್ಯವಿವಾಹದ ದೂರುಗಳು ಬಂದಿದ್ದು, ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್ ನಿಂದ ತಡೆಯಾಜ್ಞೆ ಪಡೆಯಲಾಗಿದೆ. ಇದೇ ಅವಧಿಯಲ್ಲಿ ಹೊನ್ನಾಳಿ ತಾಲ್ಲೂಕಿನಲ್ಲಿ 1 ಬಾಲ್ಯವಿವಾಹವು ಆಗಿದ್ದು. ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹ ತಡೆದ ಪ್ರಕರಣಗಳಲ್ಲಿ ಪೋಷಕರು ಮುಂದಿನ ದಿನಗಳಲ್ಲಿ ಮದುವೆ ಮಾಡಬಹುದಾಗಿದೆ ಎಂದು ಸಭೆಗೆ ತಿಳಿಸಿದರು. ಈ ಎಲ್ಲಾ ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಿಸುವುದು ಅಥವಾ ಪೊಲೀಸ್‍ರವರಿಗೆ ಮಾಹಿತಿ ನೀಡಿ ಅನುಸರಣೆ ಮಾಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮಾ.ಕರೆಣ್ಣವರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ್ ಕುಮಾರ್ ಎಂ.ಸಂತೋಷ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಿ.ಡಿ.ಪಿ.ಐ ಕೊಟ್ರೇಶ್ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.




