ನಾರೀ ಸ್ವಾಸ್ಥ್ಯ ಮತ್ತು ಸಬಲೀಕರಣಕ್ಕಾಗಿ ಆಯುರ್ವೇದ ಸಪ್ತಾಹ ಕಾರ್ಯಕ್ರಮ

1 year ago

9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನಾರೀ ಸ್ವಾಸ್ಥ್ಯ ಮತ್ತು ಸಬಲೀಕರಣಕ್ಕಾಗಿ ಆಯುರ್ವೇದ ಸಪ್ತಾಹದ ಅಂಗವಾಗಿ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪದವಿ ಪೂರ್ವ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ಆಯುರ್ವೇದ ಪಾತ್ರದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರಕುಮಾರ್. ಬಿ.ಯು. ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಕೊಟ್ರೇಶ್.ವಿ.ಬಿ. ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯಾಧಿಕಾರಿ ಡಾ.ಸುರೇಶ್ ಕುಮಾರ್.ಎಂ.ಸಿ. ಮತ್ತು ಉಪಮುಖ್ಯ ವೈದ್ಯಾಧಿಕಾರಿ ಡಾ.ಸುಚಿತ್ರಾ.ಎಸ್.ಎಸ್ ಆಯುರ್ವೇದದ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲರು ಶಿವಲಿಂಗಯ್ಯ.ಬಿ.ಎಂ., ಶಿಕ್ಷಕರಾದ ನಾಗರಾಜ್ ಹಾಗೂ ಶಾಲಾ ಬೋಧಕ ವರ್ಗದವರು, ಯೋಗ ತರಬೇತುದಾರರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply