ಬೆಂಗಳೂರು: ಬಾಬು ರೆಡ್ಡಿ ಬೈರತಿ ಅವರನ್ನು ಬೆಂಗಳೂರು ಕೇಂದ್ರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ, ತಾವು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಹಾಗೂ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಮತ್ತು ಜಿಲ್ಲಾ ಮುಖಂಡರುಗಳ ಶಿಫಾರಸ್ಸಿನೊಂದಿಗೆ ಈ ನೇಮಕಾತಿಯನ್ನು ಮಾಡಲಾಗಿದೆ ಎಂದಿದ್ದಾರೆ.
ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಹಾಗೂ ಕಿಸಾನ್ ಘಟಕದ ಮೂಲಕ ರೈತರನ್ನು ಪಕ್ಷದಲ್ಲಿ ಸಂಘಟಿಸಲು ಶ್ರಮಿಸಬೇಕೆಂದು ಕೋರಿದ್ದು, ಈ ನಿಟ್ಟನಲ್ಲಿ ತಾವು ಕೂಡಲೇ ರಾಜ್ಯ ಹಾಗೂ ಜಿಲ್ಲಾ ಮುಖಂಡರುಗಳ ಸಹಕಾರದೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಸುತ್ತಾ, ಈ ನಿಟ್ಟನಲ್ಲಿ ತಮಗೆ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ.



