ಬಳ್ಳಾರಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜೂ.30 ರ ವರೆಗೆ ವಿಸ್ತರಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 8050370006 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಸಂಪರ್ಕಿಸಬಹುದು.




