ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಇದೇ 9ರಂದು ತೀರ್ಪು ಕಾಯ್ದಿರಿಸಿದ್ದರು. ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದ್ದು,ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಿದೆ.




