ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ತಮ್ಮ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಜಾಮೀನು ಪಡೆದುಕೊಂಡರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅಂಟಿಸಿದ್ದ ಪೋಸ್ಟರ್ ಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನಾಯಕರು ಕೆಪಿಸಿಸಿ, ಅಂದಿನ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ನ್ಯಾಯಾಲಯ ಕುದ್ದು ಹಾಜರಾತಿಗೆ ಸೂಚಿಸಿ ಸಮನ್ಸ್ ಜಾರಿಗೊಳಿಸಿತ್ತು. ಅದರಂತೆ ಕಳೆದ ವಾರ ಕೋರ್ಟ್ ಮುಂದೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಾಮೀನು ಪಡೆದುಕೊಂಡಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಂದು ವಿಚಾರಣೆಗೆ ಹಾಜರಾಗದೆ ರಾಹುಲ್ ಗಾಂಧಿ ವಿನಾಯತಿ ಪಡೆದುಕೊಂಡಿದ್ದರು.
ಅಂದು ನ್ಯಾಯಾಲಯ ನೀಡಿದ ಸೂಚನೆ ಆಧರಿಸಿ ರಾಹುಲ್ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾದರು. ಹಾಜರಾತಿಯನ್ನು ಮಾನ್ಯ ಮಾಡಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು, ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದರು.
ದೆಹಲಿಯಿಂದ ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್ ಕೋರ್ಟ್ವರೆಗೂ ವ್ಯಾಪಕ ಭದ್ರತೆ ಒದಗಿಸಲಾಗಿತ್ತು.
ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿ ಅವರ ಜೊತೆ ಕೋರ್ಟ್ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 70 ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್ನ ಭದ್ರತೆ ಒದಗಿಸಿದ್ದಾರೆ.



