ಸರ್ಕಾರಿ ಕಚೇರಿ ಮತ್ತು ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ನಿಷೇಧ

2 years ago

ಬೆಂಗಳೂರು: ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳ ಸೇವನೆಯಿಂದ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ಬಳಕೆ ಮೇಲೆ ನಿಯಂತ್ರಣ ವಿಧಿಸಲು ಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಿದೆ.

ಇದರ ಮುಂದುವರಿದ ಭಾಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಆವರಣವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸಿದೆ.

ರಾಜ್ಯದ ಯಾವುದೇ ಸರ್ಕಾರಿ ಕಚೇರಿ ಮತ್ತು ಆವರಣದಲ್ಲಿ ಬೀಡಿ ಸಿಗರೇಟು ಗುಟ್ಕಾ ಸೇರಿದಂತೆ ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಈ ಆದೇಶವನ್ನು ಉಲ್ಲಂಘಿಸಿ ಸರ್ಕಾರಿ ಕಚೇರಿಗಳು ಮತ್ತು ಆವರಣದಲ್ಲಿ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶ ಹೊರಡಿಸಿದೆ.

Leave a Reply