ಧಾರವಾಡ: ಸಾರ್ವತ್ರಿಕ ಲೋಕಸಭಾ ಚುನಾವಣೆ ದಿನಾಂಕ ನಿಗದಿಪಡಿಸಿ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಮಾರ್ಚ್ 16 ರಿಂದ ಜಾರಿಯಲ್ಲಿದೆ. ಯಾವುದೇ ದಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದನ್ನು ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ನಿಷೇಧಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಾಲಯ ಮಂದಿರ, ಚರ್ಚ್, ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವುದನ್ನು ನಿಷೇಧಿಸಲಾಗಿದೆ. ಮೇಲೆ ಹೇಳಲಾದ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.



