ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ, ಪಾನೀಯ, ತಿಂಡಿ-ತಿನಿಸು ಆಹಾರ ಪಧಾರ್ಥಗಳಿಗೆ ಕಪ್, ಮೇಣಲೇಪಿತ ಪೇಪರ್ ಕಪ್ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಚಮಚ, ಸ್ಟ್ರಾ ಗಳ ಬಳಕೆಯನ್ನು ನಿಷೇದಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನಗರದ ಯಾವುದೇ ಬೀದಿ ಬದಿ ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಕಪ್ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳನ್ನು ಉಪಯೋಗಿಸದಂತೆ ಸೂಚಿಸಿದ್ದು, ನಗರದ ಸ್ವಚ್ಛತೆ, ಸೌಂದರ್ಯ ಹಾಗೂ ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡಲು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ನಿಯಮಾನುಸಾರ ದಂಡ ವಿಧಿಸಲಾಗುವುದು. ಆದ್ದರಿಂದ ಎಲ್ಲಾ ಬೀದಿ ಬದಿ ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ತ್ಯಾಜ್ಯನಿರ್ವಹಣಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.




