ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿಗೆ ಒಟ್ಟು 75 ಜನ ಸದಸ್ಯರ ಆಯ್ಕೆ ವಿವಿಧ ರೀತಿಯಲ್ಲಿ ನಡೆಯುತ್ತದೆ. ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಪ್ರತಿ ಎರಡು ವರ್ಷಕ್ಕೊಮ್ಮೆ ಚುನಾವಣೆ ನಡೆದು ಸದಸ್ಯರು ಆಯ್ಕೆಯಾಗುತ್ತಾರೆ. ಅದೇ ರೀತಿಯಲ್ಲಿ ಆಡಳಿತಕ್ಕೆ ಬಂದ ಸರ್ಕಾರಗಳು ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ವ್ಯಕ್ತಿಗಳನ್ನು ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡುತ್ತಾರೆ. ಇದಲ್ಲದೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಸದಸ್ಯರುಗಳು ಆಯ್ಕೆಯಾಗುತ್ತಾರೆ. ವಿಶೇಷವಾಗಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆರು ವರ್ಷಕ್ಕೊಮ್ಮೆ ಚುನಾವಣೆಗಳು ನಡೆದು ಸದಸ್ಯರುಗಳು ಆಯ್ಕೆಯಾಗುತ್ತಾರೆ.
- ಅಮೆರಿಕದಿಂದ 1 ಲಕ್ಷ ಕೋಟಿ ರೂ. ವಾಪಸ್ ಪಡೆಯುವುದಾಗಿ ಮೋದಿ ಶಪಥ ಮಾಡಿದ್ದಾರೆಯೇ?
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
ಬೆಂಗಳೂರು ಪದವೀಧರ ಕ್ಷೇತ್ರದ ಹೆಸರು 1958ರಲ್ಲಿ ಮೈಸೂರು ದಕ್ಷಿಣ ಪದವೀಧರ ಕ್ಷೇತ್ರವೆಂದು ಇರುತ್ತದೆ. ಇಲ್ಲಿಗೆ ಇಬ್ಬರು ಸದಸ್ಯರನ್ನು ಆಯ್ಕೆ ಮಾಡುವಂತಹ ಅಧಿಕಾರವಿರುತ್ತದೆ. ಲಕ್ಷ್ಮಮ್ಮ ಎಂಆರ್ ಮತ್ತು ಆಂಜನಪ್ಪ ಬಿವಿ ಇವರು ಆಯ್ಕೆ ಆಗಿರುತ್ತಾರೆ. 1964 ರಲ್ಲಿ ಮತ್ತೊಮ್ಮೆ ಇವರಿಬ್ಬರು ಆಯ್ಕೆಯಾಗಿರುತ್ತಾರೆ. 1970, 1976 ಮತ್ತು 1982ರಲ್ಲಿ ಶ್ರೀ ವಿ ಎಸ್ ಕೃಷ್ಣ ಅಯ್ಯರ್ ರವರು ವಿಧಾನ ಪರಿಷತ್ತಿಗೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗುತ್ತಾರೆ. 1970ರಲ್ಲಿ ಮೈಸೂರು ದಕ್ಷಿಣ ಪದವೀಧರ ಕ್ಷೇತ್ರ ಬೆಂಗಳೂರು ಪದವೀಧರ ಕ್ಷೇತ್ರವಾಗಿ ಬದಲಾಗುತ್ತದೆ. ಇದರ ವ್ಯಾಪ್ತಿಗೆ ಕೋಲಾರವು ಒಳಗೊಂಡಿರುತ್ತದೆ.
1984ರಲ್ಲಿ ವಿ ಎಸ್ ಕೃಷ್ಣ ಅಯ್ಯರ್ ರವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ನಂತರ 1984ರಲ್ಲಿ ನಡೆದಂತಹ ಉಪಚುನಾವಣೆಯಲ್ಲಿ ಪ್ರೊಫೆಸರ್ ಬಿಕೆ ಚಂದ್ರಶೇಖರ್ ಅವರು ಆಯ್ಕೆಯಾಗುತ್ತಾರೆ. ಮತ್ತೆ 1988 ರಲ್ಲಿ ನಡೆದಂತಹ ಚುನಾವಣೆಯಲ್ಲಿ ಶ್ರೀರಾಮಚಂದ್ರಗೌಡರು ಆಯ್ಕೆಯಾಗುತ್ತಾರೆ. ಇವರು ಸತತವಾಗಿ ಐದು ಬಾರಿ ಬೆಂಗಳೂರು ಪದವೀಧರ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗುತ್ತಾರೆ.
ಕಳೆದ ಬಾರಿ ಚುನಾವಣೆಯಲ್ಲಿ ಅ.ದೇವೇಗೌಡರು ಆಯ್ಕೆಯಾಗಿದ್ದರು. ಈ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿದ್ದ ವಿ ಎಸ್ ಕೃಷ್ಣ ಅಯ್ಯರ್ ಅವರು ಉಪಸಭಾಪತಿಯಾಗಿ, ಶ್ರೀರಾಮಕೃಷ್ಣ ಹೆಗಡೆ ರವರ ಸಂಪುಟದಲ್ಲಿ ನಗರ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿರುತ್ತಾರೆ. ಅದೇ ರೀತಿಯಲ್ಲಿ ಶ್ರೀರಾಮಚಂದ್ರಗೌಡರು ಆರೋಗ್ಯ ಸಚಿವರಾಗಿ ಬಿಜೆಪಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುತ್ತಾರೆ.
ಈಗ ಬೆಂಗಳೂರು ಪದವೀಧರ ಕ್ಷೇತ್ರದ ವ್ಯಾಪ್ತಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾತ್ರ ಒಳಗೊಂಡಿರುತ್ತದೆ. ಈಗ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರೀ ರಾಮೋಜಿಗೌಡರು ಅಭ್ಯರ್ಥಿಯಾಗಿರುತ್ತಾರೆ.
ರಾಜ್ಯದಲ್ಲಿ ಅತ್ಯಂತ ಹೆಚ್ಚು ಪ್ರಜ್ಞಾವಂತ ಮತ್ತು ವಿಚಾರವಂತ ಮತದಾರರನ್ನು ಹೊಂದಿರುವ ಕ್ಷೇತ್ರವೆಂದರೆ ಬೆಂಗಳೂರು ಪದವೀಧರ ಕ್ಷೇತ್ರವಾಗಿರುತ್ತದೆ. ಪದವೀಧರ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ನೋಂದಾಯಿಸಿಕೊಳ್ಳುತ್ತಿರುವುದರಿಂದ ಮತದಾರರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ.
ಪದವೀಧರರಿಗೆ ಪ್ರಮುಖವಾಗಿ ಕಾಡುತ್ತಿರುವುದು ನಿರುದ್ಯೋಗದ ಸಮಸ್ಯೆ. ಸರ್ಕಾರಗಳಲ್ಲಿ ನೇಮಕಾತಿ ಪ್ರಕ್ರಿಯೆ ಕಾಲಕಾಲಕ್ಕೆ ನಡೆಯುತ್ತಿಲ್ಲ. ಇನ್ನು ಖಾಸಗಿ ಕಂಪನಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಉದ್ಯೋಗದ ಸಂಖ್ಯೆಯನ್ನು ಕಡಿತಗೊಳಿಸುತ್ತಿದ್ದಾರೆ. ಹೀಗಾಗಿ ನಿರುದ್ಯೋಗ ಸಮಸ್ಯೆ ಹೆಮ್ಮರವಾಗಿ ಬೆಳದಿದೆ.
ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು ಮತ್ತು ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು.
ರಾಮೋಜಿ ರಾವ್ ರವರು ಈ ನಿಟ್ಟಿನಲ್ಲಿ ಈಗಾಗಲೇ ತಮ್ಮ ಪ್ರಣಾಳಿಕೆಯಲ್ಲಿ ಕೆಲವು ಅಂಶಗಳನ್ನು ಬಹಿರಂಗಪಡಿಸಿರುವುದರಿಂದ ಪದವೀಧರ ಮತದಾರರಿಗೆ ಭರವಸೆ ಬಂದಿರುತ್ತದೆ. ಈ ಕ್ಷೇತ್ರದಲ್ಲಿ ಮತದಾರರು ಶಿಕ್ಷಣ ಕ್ಷೇತ್ರದಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿರುವವರು, ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗದಲ್ಲಿರುವವರು ಮತ್ತು ಬೇರೆ ಬೇರೆ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವವರು ಒಳಗೊಂಡಿರುತ್ತಾರೆ.
– ಕೆ ಎಸ್ ನಾಗರಾಜ್, ಬೆಂಗಳೂರು



