ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಬಲೀಕರಣ ಹಾಗೂ ಇತರೆ ಹಿಂದುಳಿದ ವರ್ಗಗಳ (ಓಬಿಸಿ) ಕೋಶಗಳ ಕಚೇರಿಗಳನ್ನು ಹಾಗೂ ಪರೀಕ್ಷಾ ಪೂರ್ವ ತರಬೇತಿ ಕೇಂದ್ರವನ್ನು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಬಿ.ರಮೇಶ್ ಉದ್ಘಾಟಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನಂತರ ಮಾತನಾಡಿದ ಪ್ರೊ.ಬಿ.ರಮೇಶ್, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ನೆರವು ಒದಗಿಸಲು ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಪರೀಕ್ಷಾಪೂರ್ವ ತರಬೇತಿ ಕೇಂದ್ರದ ಮೂಲಕ ಜ್ಞಾನಜ್ಯೋತಿ ಕ್ಯಾಂಪಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು ಸೂಕ್ತ ತರಬೇತಿ ಒದಗಿಸಲಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮೂಲಕ ವೃತ್ತಿಪರ ಪರಿಣತಿ ದೊರಕಿಸಿ ಪ್ರತಿವರ್ಷ ಉದ್ಯಮ ವಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ಬಿ.ಆರ್. ಸುಪ್ರೀತ್, ಡಾ. ಎಚ್. ಕೃಷ್ಣರಾಮ್, ಕೆ.ಪಿ.ಪಾಟೀಲ್, ಶಿಲ್ಪ ಶ್ರೀ, ಪಿ.ಎಂ.ಚೈತ್ರಾ, ಆಯಿಷಾ ಫರ್ಜಾನಾ ಹಾಗೂ ಹಿರಿಯ ಪ್ರಾಧ್ಯಾಪಕರು, ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




