ಮೈಸೂರು: ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು.
ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೂ ಇದು ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ ಎಂದರು.
ಕರ್ನಾಟಕದಲ್ಲಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತಾಗಿ ಜಾತ್ಯಾತೀತವಾಗಿ ಮಾತನಾಡುವುದಿಲ್ಲ. ಬಾನು ಮುಷ್ತಾಕ್ ಅವರಿಗೆ ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಇದ್ದರೆ ಕನ್ನಡದಲ್ಲಿ ಬರೆಯುತ್ತಾರೆಯೇ? ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ ಎಂದರು.
ಎದೆಯ ಹಣತೆ ಕೃತಿಯನ್ನು ಭಾಷಾಂತರ ಮಾಡಿದ ದೀಪಾ ಭಾಸ್ತಿಯವರನ್ನೂ ನಾವು ಮರೆತಿಲ್ಲ. ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಬಾನು ಮುಷ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂ.ಗಳನ್ನು ನೀಡಿ, ಸನ್ಮಾನಿಸಿ, ಗೌರವಿಸಿದ್ದೇವೆ ಎಂದರು.




