ಮಂಡ್ಯ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದರೆ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಂದಿನ ಮುಡಾ ಅಧ್ಯಕ್ಷ ಮೊದಲು ಜೈಲಿಗೆ ಹೋಗಬೇಕಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭವಿಷ್ಯ ನುಡಿದಿದ್ದಾರೆ.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಕಾಂಗ್ರೆಸ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವೇ ಇಲ್ಲ. ಹಗರಣ ನಡೆದಿದೆ ಎನ್ನಲಾದ ಸಮಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿತ್ತು ಎಂದರು.
ವಿಧಾನಸಭೆ ಚುನಾವಣೆಯಲ್ಲಿ135 ಸ್ಥಾನಗಳನ್ನು ಗೆದ್ದು, ಜನರಿಂದ ಆಯ್ಕೆಯಾಗಿ ಬಂದಿರುವ ‘ಕಾಂಗ್ರೆಸ್ ಸರ್ಕಾರವನ್ನು ತೆಗೀತೀವಿ’ ಎಂದು ಬಿಜೆಪಿ-ಜೆಡಿಎಸ್ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಹೀಗೆ ಹೇಳುವುದೇ ಕ್ರಿಮಿನಲ್ ಅಪರಾಧ. ಈ ಆರೋಪದಡಿ ಇವರನ್ನು ಜೈಲಿಗೆ ಹಾಕಬಹುದು. ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಅಸಮಾಧಾನನ ವ್ಯಕ್ತಪಡಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಕಾರಣಕ್ಕೂ ಬರುವ ಮುಂಚೆಯೇ ಬಿಸಿನೆಸ್ ಮಾಡುತ್ತಿದ್ದರು. ಅವರು ಗಳಿಸಿರುವ ಆಸ್ತಿಗೆ ‘ಲೀಗಲ್ ಡಾಕ್ಯುಮೆಂಟ್’ ಇವೆ. ಆದರೆ, ಎಚ್.ಡಿ.ಕುಮಾರಸ್ವಾಮಿ ಯಾವುದೇ ಬಿಸಿನೆಸ್ ಇಲ್ಲದೇ ಏರ್ಪೋರ್ಟ್ ರಸ್ತೆ, ನೆಲಮಂಗಲ ರಸ್ತೆ, ಕೆಂಗೇರಿ ರಸ್ತೆಗಳಲ್ಲಿ ಅಪಾರ ಆಸ್ತಿ ಮಾಡಿದ್ದಾರೆ. ಸಿನಿಮಾ ರಂಗದಿಂದ ಇಷ್ಟೊಂದು ಆಸ್ತಿ ಮಾಡಲು ಸಾಧ್ಯವೇ? ಕುಮಾರಸ್ವಾಮಿ ಸಿನಿಮಾ ರಂಗದಲ್ಲಿ ದುಡ್ಡು ಮಾಡಿದ್ದರೆ ಲೆಕ್ಕ ತೋರಿಸಲಿ ಎಂದು ಸವಾಲೆಸೆದರು.
ಕುಮಾರಸ್ವಾಮಿ ಮಳೆ ಮತ್ತು ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ಕೊಡುವುದು ದೊಡ್ಡಸ್ತಿಕೆ ಅಲ್ಲ. ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅಡಿ ಪರಿಹಾರ ಕೊಡಿಸಬೇಕು. ರಾಜಕೀಯ ಕೆಸರೆರಚಾಟ ನಿಲ್ಲಿಸಿ, ಅಭಿವೃದ್ಧಿ ಬಗ್ಗೆ ಗಮನಹರಿಸಲಿ ಎಂದರು.



