ಫೆ. 10ರಂದು ಬಜೆಟ್ ಮಂಡಿಸಲಿದ್ದಾರೆ ಬಸವರಾಜ ಬೊಮ್ಮಾಯಿ

3 years ago

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಕನಸು ಕಾಣುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ‌ ಫೆಬ್ರವರಿ 10 ರಂದು ತಮ್ಮ ಕನಸಿನ ಬಜೆಟ್ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ಕಳೆದ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳು ಹಾಗೂ ಅದರ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ ಫೆಬ್ರವರಿ 10ರಂದು ಬಜೆಟ್ ಮಂಡನೆ ಮಾಡುವ ಸಾಧ್ಯತೆಯಿದ್ದು, ಫೆ. 26ರವರೆಗೆ ಈ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಚುನಾವಣಾ ವರ್ಷವಾಗಿರುವುದರಿಂದ ಈ ಬಾರಿಯ ಬಜೆಟ್‍ನಲ್ಲಿ ಜನಪ್ರಿಯ ಘೋಷಣೆ ಜೊತೆಗೆ ಆರ್ಥಿಕ ಶಿಸ್ತು, ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಯೋಜನೆಗಳು, ಮತದಾರರನ್ನು ಆಕರ್ಷಿಸುವ ಬಜೆಟ್ ಇದಾಗಲಿದೆ ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ ತಿಂಗಳಲ್ಲಿ ನಡೆಯುವ ವಿಧಾನ ಮಂಡಲದ ಚಳಿಗಾಲದ ಅವೇಶನದ ಬಳಿಕ ಸಿಎಂ ಬಜೆಟ್ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Leave a Reply