ಬೆಂಗಳೂರು: ತಮಗೆ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಸಿಎಂ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು ಎಂದಿದ್ದಾರೆ.
ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ಎಂದಿದ್ದಾರೆ.
ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸಿದ್ದಾರೆ.
ಮತ್ತೊಮ್ಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.




