ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹಾಗೂ ರಾಜ್ಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ ಶಿಕ್ಷಣ ಸಂಸ್ಥೆಯನ್ನು ಅತಿಕ್ರಮಣ ಮಾಡಿರುವ ಆರೋಪ ಕೇಳಿಬಂದಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಹರಿಹರದ ವಾಲ್ಮೀಕಿ ಮಠಕ್ಕೆ ಸೇರಿದ ಸರ್ವೋದಯ ಶಿಕ್ಷಣ ಟ್ರಸ್ಟ್ ಅನ್ನು ಬಸವರಾಜ ಹೊರಟ್ಟಿ ಅವರು ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ 2022 ನವೆಂಬರ್ನಲ್ಲಿ ದೂರು ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಎಫ್ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿ ಅರುಣ್ ಎಸ್.ಹಿರೇಹಾಳ್ ಎಂಬುವರು ಕೇಂದ್ರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ವಿಚಾರಣೆಗೆ ಬರುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಮನ್ಸ್ ನೀಡಿದೆ. ದೆಹಲಿಯ ಎನ್ಸಿ-ಎಸ್ಟಿ ಕೇಂದ್ರ ಕಚೇರಿಯಲ್ಲಿ ಡಿಸೆಂಬರ್ 12ರಂದು ವಿಚಾರಣೆ ನಡೆಯಲಿದೆ. ಆಯೋಗದ ಸದಸ್ಯ ಜತೊತು ಹುಸೇನ್ ಅವರು ವಿಚಾರಣೆ ನಡೆಸುತ್ತಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್ಪಿ ಗೋಪಾಲ ಬ್ಯಾಕೋಡ ಅವರಿಗೆ ಸೂಚನೆ ನೀಡಲಾಗಿದೆ.




