ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅವರು, 45 ವರ್ಷಗಳ ಕಾಲ ನಿರಂತರವಾಗಿ ವಿಧಾನ ಪರಿಷತ್ತಿನಲ್ಲಿ ಸೇವೆ ಸಲ್ಲಿಸುವ ಮೂಲಕ ವಿಶಿಷ್ಟ ದಾಖಲೆ ಮಾಡಿರುವ ಈ ಸಂದರ್ಭದಲ್ಲಿ ತಮಗೆ ನನ್ನ ಹಾರ್ದಿಕ ಶುಭಾಶಯಗಳು.
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
ಕರ್ನಾಟಕವಷ್ಟೇ ಅಲ್ಲದೇ, ಇಡೀ ದೇಶದ ರಾಜಕೀಯ ಕ್ಷೇತ್ರದಲ್ಲಿನ ಅಪರೂಪದ ಸಾಧನೆ ನಿಮ್ಮದಾಗಿದೆ. 1980ರ ದಶಕದಿಂದಲೇ ಶಿಕ್ಷಕರ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ತಾವು ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸಂವೇದನಶೀಲ ಗುಣಗಳನ್ನು ಹೊಂದಿರುವ ಕೆಲವೇ ರಾಜಕಾರಣಿಗಳಲ್ಲಿ ಒಬ್ಬರು.
ಶಿಕ್ಷಕರ ಹಿತಾಸಕ್ತಿಗಾಗಿ ಹೋರಾಟ ನಡೆಸಿ, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ನಿಮ್ಮ ಪರಿಶ್ರಮ ಇತರ ಎಲ್ಲಾ ಕ್ಷೇತ್ರಗಳ ಪ್ರಗತಿಗಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಅನುಕರಣೀಯ.
ವಿಧಾನ ಪರಿಷತ್ ತಮ್ಮ ಸುದೀರ್ಘ ಸೇವೆ ಲಿಮ್ಕಾ ಬುಕ್ ದಾಖಲೆಯಲ್ಲಿ ಸೇರಿರುವುದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ ಎಂದು ನಾನು ಭಾವಿಸುತ್ತೇನೆ.
ತಮ್ಮ ಶ್ರಮದ ಬದುಕು, ಸಾರ್ಥಕ ಸಾಧನೆಗಳು ಈ ನಾಡಿನ ಯುವ ಜನರಿಗೆ ಸ್ಪೂರ್ತಿಯಾಗಲಿ ಎಂದು ಆಶಿಸುತ್ತಾ ತಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತಿದ್ದೇನೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




