ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಲೋಕಸಭೆ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿ ಇರುವುದರಿಂದ ಸರಳವಾಗಿ ಆಚರಿಸಲಾಯಿತು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿಯಿರುವ ಬಸವೇಶ್ವರರ ಪ್ರತಿಮೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯ ಶುಭಾಶಯ ಕೋರಿದರು.
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ: ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.




