ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ಜಂಟಿಯಾಗಿ ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಶೇಕಡ 25% ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಫ್ರೀಡಂ ಪಾರ್ಕಿನಲ್ಲಿ ಸಾವಿರಾರು ಗುತ್ತಿಗೆದಾರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ನೇತೃತ್ವದಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಮತ್ತು ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ನೀಡಿದರು.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಎಂ.ನಂದಕುಮಾರ್ ಮಾತನಾಡಿ, ಬಿಬಿಎಂಪಿ ಮುಖ್ಯ ಆಯುಕ್ತರು ಕೂಡಲೆ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ನಮ್ಮ ಹೋರಾಟಕ್ಕೆ ರಾಜ್ಯ ಗುತ್ತಿಗೆದಾರರ ಸಂಘವು, ಎಲ್ಲ ಜಿಲ್ಲೆಯ ಗುತ್ತಿದಾರರು ಬೆಂಬಲ ನೀಡುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ನಮ್ಮ ಸಮಸ್ಯೆ ಬಗೆಹರರಿಸಬೇಕು ಎಂದು ಒತ್ತಾಯಿಸಿದರು.
ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ಒಬ್ಬ ಗುತ್ತಿಗೆದಾರರನ್ನು ನಂಬಿಕೊಂಡು ನೂರಾರು ಕುಟುಂಬಗಳು ಇರುತ್ತವೆ. ಕಲ್ಲು , ಜಲ್ಲಿ, ಮರಳು ಮಾರಾಟ ಮಾಡುವವರು ಹಾಗೂ ಕಟ್ಟಡ ಮತ್ತು ರಸ್ತೆ ಚರಂಡಿ ಮತ್ತು ಒಳಚಂರಡಿ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಯನಿರ್ವಹಿಸುತ್ತಾರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಗುತ್ತಿಗೆದಾರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಕಾಮಗಾರಿ ಬಿಲ್ ಪಾವತಿ ತಡವಾಗುವುದರಿಂದ ಬ್ಯಾಂಕ್ ನಿಂದ ಸಾಲದ ಮೇಲಿನ ಬಡ್ಡಿ ದರ ಹೆಚ್ಚಾಗುತ್ತದೆ ಮತ್ತು ಹಾಗೂ ಕಾಮಗಾರಿ ಬಿಲ್ ಸಂಪೂರ್ಣ ಪಾವತಿಯಾಗಿಲ್ಲವೆಂದರೆ ಗುತ್ತಿಗೆದಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾನೆ ಎಂದರು.
ಗುತ್ತಿಗೆದಾರರು ಉಳಿಯಬೇಕು ಎಂದರೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕೂಡಲೆ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು ಎಂದರು.




