ಬೆಂಗಳೂರು: ರಾಜ್ಯದಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ.) ಅತ್ಯಂತ ಜನಪ್ರಿಯ ಹಾಗೂ ಅಗ್ಗದ ವಸತಿ ವ್ಯವಸ್ಥೆಯಾಗಿದೆ. ವಿದ್ಯಾರ್ಥಿಗಳು ಒಂಟಿಯಾಗಿರುವ ಉದ್ಯೋಗಸ್ಥರಿಗೆ ಇವುಗಳು ಆಶ್ರಯ ತಾಣಗಳಾಗಿವೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ರಾಜಧಾನಿ ಬೆಂಗಳೂರಿನಲ್ಲಂತೂ ಸಾವಿರಾರು ಸಂಖ್ಯೆಯಲ್ಲಿ ಪಿ.ಜಿ.ಗಳು ತಲೆಯೆತ್ತಿ ನಿಂತಿವೆ. ಇದೀಗ ಇವುಗಳಲ್ಲಿ ಸುರಕ್ಷತೆ ಮತ್ತು ಸ್ವಚ್ಛತೆಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಅವುಗಳ ಮೇಲೆ ನಿಗಾ ವಹಿಸಲು ಸ್ಥಳೀಯ ಆಡಳಿತ ಮುಂದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಿ.ಜಿ.ಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪಿಜಿಗಳು ಲೈಸೆನ್ಸ್ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.
ಈ ನಡುವೆ ಪಿ.ಜಿ.ಗಳಲ್ಲಿ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ (FSSAI) ಇಲಾಖೆ ಪಿಜಿಗಳ ಆಹಾರದ ಗುಣಮಟ್ಟ ಪರೀಕ್ಷಿಸಲು ಸಿದ್ಧತೆ ನಡೆಸಲಾಗಿದೆ.
ಇಲಾಖೆ ಅಧಿಕಾರಿಗಳ ತಂಡ ಹಲವು ಪಿಜಿಗಳಿಗೆ ಭೇಟಿ ನೀಡಿ, ಅಲ್ಲಿ ತಯಾರಾಗುವ ಆಹಾರ ಮತ್ತು ಅಡುಗೆ ಕೋಣೆ ಎಲ್ಲವನ್ನು ಪರಿಶೀಲಿಸಿದೆ. ಈ ವೇಳೆ ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ.
ರಾಜ್ಯದ 305 ಪಿಜಿಗಳಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.



