ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಎಚ್ಚರ ವಹಿಸಿ: ಲಕ್ಷ್ಮೀಪ್ರಿಯಾ

8 months ago

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಆ.20 ಬೆಳಗ್ಗೆ 8.30 ಗಂಟೆಯವರೆೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಏರುತ್ತಿರುತ್ತದೆ.

ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಆ.18 ರಂದು ಮಧ್ಯಾಹ್ನ 1 ಗಂಟೆಗೆ ಜಲಾಶಯದ ನೀರಿನ ಮಟ್ಟವು 1815.50 ಅಡಿಗಳಿಗೆ ತಲುಪಿರುತ್ತದೆ. ಈ ದಿನ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 59,891 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದ ಪಕ್ಷದಲ್ಲಿ ಜಲಾಶಯ ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಆ.19 ರಂದು ಬೆಳಗ್ಗೆ 10 ಗಂಟೆಯಿAದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಇಂಜಿನಿಯರ್ ಕೆ ಪಿ ಸಿ ಲಿಂಗನಮಕ್ಕಿ ತಿಳಿಸಿದ್ದಾರೆ.

ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ಹೊನ್ನಾವರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ತಳಮಟ್ಟದ ಗ್ರಾಮಗಳ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಪ್ರವಾಹ ಸಂಭವನೀಯ ಸ್ಥಳಗಳ ಸಾರ್ವಜನಿಕರು ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವುದು.

ಶರಾವತಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರ ಕುರಿತು ಕಾಳಜಿ ಕೇಂದ್ರಗಳನ್ನು ಅಣಿಗೊಳಿಸಲಾಗಿರುತ್ತದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಪ್ರೀ ಸಂಖ್ಯೆ 08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ತಿಳಿಸಿದ್ದಾರೆ.

Leave a Reply