ಡೆಂಗ್ಯೂ ಜ್ವರದಿಂದ ಪಾರಾಗಿ
ಜಾಗೃತಿ ಕಾರ್ಯಕ್ರಮದಲ್ಲಿ ಟಿಹೆಚ್‍ಒ ಡಾ.ಬಿ.ವಿ.ಗಿರೀಶ್ ಸಲಹೆ
ಚಿತ್ರದುರ್ಗ: ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿಗಳು ಕೀಟಜನ್ಯ ರೋಗಗಳ ಬಗ್ಗೆ ಮಾಹಿತಿ ತಿಳಿದು ಸೊಳ್ಳೆ ಬೆಳೆಯದಂತೆ ನಿಗಾವಹಿಸಿ ಸೊಳ್ಳೆ ಕಚ್ಚಿಸಿಕೊಳ್ಳದಂತೆ ಮುಂಜಾಗ್ರತ ಕ್ರಮಗಳನ್ನು ಪಾಲಿಸಿ ಡೆಂಗ್ಯೂ ಜ್ವರದಿಂದ ಪಾರಾಗಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಕರೆ ನೀಡಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಜಂಪಯ್ಯನಹಟ್ಟಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಡೆಂಗ್ಯೂ ಮಾಸಾಚರಣೆ ಪ್ರಯುಕ್ತ ಡೆಂಗ್ಯೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶುದ್ಧ ನೀರಲ್ಲಿ ಬೆಳೆದ ಸೊಳ್ಳೆ ಹಗಲು ಹೊತ್ತು ಕಚ್ಚುವುದರಿಂದ ಡೆಂಗ್ಯೂ ಜ್ವರ ಹರಡುತ್ತಿದ್ದು, ಘನತ್ಯಾಜ್ಯ ವಿಲೇವಾರಿ ಮಾಡಿ ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಡೆಂಗ್ಯೂ ಜ್ವರ ಹರಡದಂತೆ ಜಾಗೃತರಾಗಬೇಕು ಎಂದರು.
ಗೊಡಬನಹಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅನುಷಾ ಮಾತನಾಡಿ, ಮನೆಯಲ್ಲಿನ ನೀರು ಶೇಖರಣ ತಾಣಗಳನ್ನು ವಾರಕ್ಕೆ ಒಮ್ಮೆ ಸ್ವಚ್ಛಗೊಳಿಸಿರಿ ಮತ್ತು ಮಳೆಗಾಲವಾದ್ದರಿಂದ ಮನೆಯ ಹೊರಗಡೆ ಘನ ತ್ಯಾಜ್ಯ ವಸ್ತುಗಳಲ್ಲಿ ಮಳೆಯ ನೀರು ಸಂಗ್ರಹವಾಗದಂತೆ ನಿಗಾವಹಿಸಿ ಎಂದರು.
ಶುದ್ಧ ನೀರಲ್ಲಿ ಬೆಳೆದ ಈಡಿಸ್ ಜಾತಿಯ ಸೊಳ್ಳೆ ಹಗಲು ಹೊತ್ತು ಕಚ್ಚುವುದರಿಂದ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಡೆಂಗ್ಯೂ ಜ್ವರ ಬರುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳು ಸ್ವಯಂರಕ್ಷಣಾ ವಿಧಾನಗಳನ್ನು ಬಳಸಿ ಮಲಗುವಾಗ ಸೊಳ್ಳೆ ಪರದೆ ಬಳಸಿ ಡೆಂಗ್ಯೂ ಜ್ವರದಿಂದ ಪಾರಾಗಿ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಇದ್ದಕ್ಕಿದ್ದಂತೆ ಜ್ವರ, ಕಣ್ಣಿನ ಹಿಂಭಾಗ ನೋವು, ಕೀಲು ಕಾಲುಗಳಲ್ಲಿ ಮಾಂಸ ಖಂಡಗಳಲ್ಲಿ ನೋವು, ಇವು ಡೆಂಗ್ಯೂ ಜ್ವರದ ಲಕ್ಷಣಗಳು. ಯಾವುದೇ ಜ್ವರವಿರಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿ. ಚಿಕಿತ್ಸೆ ಪಡೆಯಿರಿ. ಡೆಂಗ್ಯೂ ಜ್ವರಕ್ಕೆ ನಿಗದಿತವಾದ ಚಿಕಿತ್ಸೆ ಲಭ್ಯವಿಲ್ಲ. ರೋಗಲಕ್ಷಣಗಳಿಗನುಸಾರವಾಗಿ ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದು, ರೋಗಬಾರದಂತೆ ಎಚ್ಚರ ವಹಿಸುವುದು ಬಹು ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಗೊಡಬನಹಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಸುಧಾಕರ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ನಾಗರತ್ನ, ರಾಜೇಶ್ವರಿ, ಲತಾ, ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ, ಆಶಾ ಕಾರ್ಯಕರ್ತೆ ಶಾರದಮ್ಮ, ಅಡುಗೆ ತಯಾರಿಸುವ ಸಿಬ್ಬಂದಿ ಶ್ವೇತಾ, ಗಾಯಿತ್ರಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




