ಧಾರವಾಡ: ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಅಧಿಕಾರಿಗಳು ಸನ್ನದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಬರಪರಿಸ್ಥಿತಿ ಹಾಗೂ ಮುಂಗಾರು ಮಳೆ ಪ್ರವಾಹ ಪೂರ್ವ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್, ಜುಲೈ ಹಾಗೂ ಅಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆ ಆಗುವ ಸಂಭವ ಇದ್ದು ಮಳೆ, ಗುಡುಗು, ಮಿಂಚು ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ತಡೆಯಲು ಮುಂಜಾಗೃತ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ತಹಶೀಲ್ದಾರರು, ತಾ.ಪಂ. ಇಓಗಳು, ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳು ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಧ್ವನಿವರ್ಧಕ ಬಳಸಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತ ಸಂಬಂಧಿತ ಎಲ್ಲ ಸಂಘ, ಸಂಸ್ಥೆಗಳಲ್ಲಿ ಮಳೆ, ಗುಡುಗು, ಮಿಂಚಿನಿಂದ ತಪ್ಪಿಸಿಕೊಳ್ಳಲು ಮುಂಜಾಗೃತ ಕ್ರಮಗಳನ್ನು ಪ್ರಚಾರಗೊಳ್ಳಿಸಬೇಕು. ಮಳೆ ಬಂದಾಗ ರೈತರು ಹೊಲ, ಗದ್ದೆಗಳ ಬಯಲಲ್ಲಿ ಇರದೆ ಸುರಕ್ಷತಾ ಸ್ಥಳದಲ್ಲಿರಬೇಕು ಎಂದು ತಿಳಿಸಿದರು.
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ಥಿ ಕಾರ್ಯ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
2019 ಹಾಗೂ 2021ರಲ್ಲಿ ಜಿಲ್ಲೆಯ 78 ಗ್ರಾಮಗಳನ್ನು ಪ್ರವಾಹ ಪೀಡಿತ ಎಂದು ಗುರುತಿಸಲಾಗಿದ್ದು, ತಹಶೀಲ್ದಾರರು ಹಾಗೂ ತಾ.ಪಂ ಇಓಗಳು ತಮ್ಮ ವ್ಯಾಪ್ತಿಯ ಪ್ರವಾಹ ಸಂಭವನಿಯ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲಿಸತಕ್ಕದ್ದು, ಮುಂಜಾಗೃತ ಕ್ರಮಗಳು ಹಾಗೂ ಪರ್ಯಾಯ ವ್ಯವಸ್ಥೆಗಳ ಬಗ್ಗೆ ವರದಿ ಸಿದ್ಧಪಡಿಸತಕ್ಕದು ಎಂದು ಸೂಚಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರಾಜ ಕಾಲುವೆ ಹಾಗೂ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸತಕ್ಕದು. ಹಾಗೂ ನೀರು ಸರಾಗವಾಗಿ ಹೊಗುವಂತೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಾದ ಈಶ್ವರ ಉಳಾಗಡ್ಡಿ ಅವರಿಗೆ ತಿಳಿಸಿದರು. ರಸ್ತೆ ಬದಿಯಲ್ಲಿ ಅಪಾಯಕಾರಿ ಗಿಡ ಮರಗಳನ್ನು ಹಾಗೂ ಟೊಂಗೆಗಳನ್ನು ಈಗಲೇ ತೆರವುಗೊಳ್ಳಿಸತಕ್ಕದು. ಮ್ಯಾನ್ ಹೋಲ್‍ಗಳನ್ನು ತಕ್ಷಣವೆ ಮುಚ್ಚತಕ್ಕದು ಎಂದು ತಿಳಿಸಿದರು.
ಹೆಸ್ಕಾಂ ಅಧಿಕಾರಿಗಳು ಅಪಾಯಕಾರಿ ವಿದ್ಯುತ್ ಕಂಬಗಳ ಬಗ್ಗೆ ಈಗಲೇ ಗಮನ ವಹಿಸಿ, ಸ್ಥಳಾಂತರಗೊಳಿಸಬೇಕು. ವಿದ್ಯುತ್ ಸಂಪರ್ಕದಿಂದ ಯಾವುದೇ ಅನಾಹುತಗಳು ಆಗದಂತೆ ವಿವಿಧ ಸ್ಥಳನ್ನು ಗುರುತಿಸಿ, ಈಗಲೇ ಕ್ರಮಕೈಗೊಳ್ಳಬೇಕು. ಎಲ್ಲ ತಾಲೂಕಾ ಟಾಸ್ಕಪೋರ್ಸ್‍ಗಳು ಈಗಲೇ ಮುಂಜಾಗೃತೆಯಾಗಿ ಸಿದ್ಧಗೊಳ್ಳಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ 78 ಖಾಸಗಿ ಕೊಳವೆ ಬಾವಿಗಳಿಂದ 51 ಗ್ರಾಮಗಳಲ್ಲಿ ನೀರು ಪೂರೈಸಲಾಗುತ್ತಿದೆ. ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಒಟ್ಟು 58 ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಮೇ 14 ರಿಂದ 10 ದಿನಗಳ ಕಾಲ ನೀರು ಹರಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ ಎಂ. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯ ಅಜೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.




