ಬೆಳಗಾವಿ: ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಪ್ರದೀಪ.ಎಂ.ಜೆ ಅವರಿಗೆ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು.
ಇದೇ ವೇಳೆ ರಾಮದುರ್ಗದ ಮಾಜಿ ಶಾಸಕ ಅಶೋಕ ಮ ಪಟ್ಟಣ ಹಾಗೂ ಕಾರ್ಯಕರ್ತರಿಗೆ ಅಭಿನಂಧನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆ ಮಾಡುಸುವಂತೆ ಕಾರ್ಯಕರ್ತರಿಗೆ ಸಲಹೆ ಸೂಚನೆ ಸತೀಶ್ ಜಾರಕಿಹೊಳಿ ನೀಡಿದರು. ಜೊತೆಗೆ, ಮುಂಚೂಣಿ ಘಟಕ ಹಾಗೂ ಬ್ಲಾಕ್ ಕಾಂಗ್ರೆಸ್ ಘಟಕ ಸದಸ್ಯರ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ, ಮಹಾಂತೇಶ್ ಕೌಜಲಗಿ ಹಾಗೂ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚೀಂಗಳೆ, ಸುನೀಲ ಹನಮನ್ನವರ, ವಿಶ್ವಾಸ್ ವೈದ್ಯ, ಅರವಿಂದ ದಳವಾಯಿ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.



