ಹಾಸನ: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಬ್ಯಾಂಕಿನಲ್ಲಿ ದೊರೆಯುವ ಕೇಂದ್ರ ಸರ್ಕಾರದ ಸಾಲ ಸೌಲಭ್ಯ ಪಡೆದು ಉದ್ದಿಮೆದಾರರಾಗುವಂತೆ ಬ್ಯಾಂಕ್ ಆಫ್ ಬರೋಡ ಬ್ಯಾಂಕ್‌ನ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕ ಸುರೇಶ್ ಶೆಟ್ಟಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹನುಮಂತಪುರ ಗ್ರಾಮಪಂಚಾಯಿತಿ ಅವರಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಕೆನರಾ ಬ್ಯಾಂಕ್) ಹಾಸನ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡ ವತಿಯಿಂದ ಗ್ರಾಮಪಂಚಾಯತಿ ಸಹಯೋಗದೊಂದಿಗೆ, ಆರ್ಥಿಕ ಸೇವೆಗಳ ಇಲಾಖೆ – ಭಾರತ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣ ಸೇರ್ಪಡೆಗೊಳಿಸುವಿಕೆ (ಸ್ಯಾಚುರೇಶನ್) ಅಭಿಯಾನವನ್ನು ಹಮ್ಮಿಕೊಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಲತಾ ಸರಸ್ವತಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರಮುಖ ಸಾಮಾಜಿಕ ಭದ್ರತಾ ಠೇವಣಿ ಯೋಜನೆಗಳಾದ ಪ್ರಧಾನ ಮಂತ್ರಿ ಜನಧನ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳ ಬಗ್ಗೆ ಸವಿವರವಾಗಿ ವಿವರಿಸಿ ಎಲ್ಲರೂ ಬ್ಯಾಂಕ್ ಖಾತೆಗಳಿಗೆ ನಾಮ ನಿರ್ದೇಶನ ಕೆ ವೈ ಸಿ (ಪುನಃ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಮಾಡಿಸಲು ತಿಳಿಸಿದರು ಹಾಗೂ ಖಾತೆಯಿಲ್ಲದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಖಾತೆ ತೆರೆಯಲು ನಿರ್ದೇಶಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಕ್ಷೇತ್ರೀಯ ಕಾರ್ಯಾಲಯದ ಕ್ಷೇತ್ರೀಯ ಪ್ರಬಂಧಕ ರಾಚಪ್ಪ ಮಾತನಾಡಿ, ಬ್ಯಾಂಕುಗಳು ತಮಗೆ ಸಣ್ಣ ಮೊತ್ತದ ಸಾಲದಿಂದ ದೊಡ್ಡಮೊತ್ತದ ಸಾಲದವರೆಗೆ ಸಾಲಸೌಲಭ್ಯ ಒದಗಿಸುತ್ತವೆ ಹಾಗಾಗಿ ಎಲ್ಲರೂ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಹೊಂದಿ ಎಂದರು.
ಕೆನರಾ ಬ್ಯಾಂಕ್‌ನ ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ಪ್ರಬಂಧಕರಾದ ನೀರಜಾ ಮಾತನಾಡಿ, ಕೇಂದ್ರ ಸರ್ಕಾರದ ವಿಮಾ ಯೋಜನೆಗಳ ಪಲಾನುಭವಿಗಳ ನೈಜ ಘಟನೆಯ ವಿವರಣೆ ನೀಡಿ ಅವುಗಳ ಮಹತ್ವವನ್ನು ವಿವರಿಸಿ ಎಲ್ಲಾ ಅರ್ಹರು ಈ ಯೋಜನೆಗಳಿಗೆ ನೊಂದಾಯಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಂಕುಗಳ ವ್ಯವಸ್ಥಾಪಕರಾದ ಮೌಳಿ ರಾಜ್, ಮನು, ರವಿಶಂಕರ್, ತೇಜಸ್ವಿ, ದರ್ಶನ್, ಜಯಾಬಾಲನ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.




