ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತಗಳ್ಳತನ ಮಾಡುವ ಮುನ್ನ ಕರ್ನಾಟಕದಲ್ಲಿ ಮತಗಳ್ಳತನ ನಡೆದಿತ್ತು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಕುರಿತಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಳಿ ಸಾಕ್ಷಿ ಇದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ ಮತ್ತು ಮಹದೇವಪುರದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪಿಸಿದರು.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿದೆ. ಈ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ. ಹಾಗಾಗಿ ಅವರು ಆಗಸ್ಟ್ 4ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ರಾಹುಲ್ ಕೊಟ್ಟ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಪಾದಯಾತ್ರೆಯ ನಡೆಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದರು.




