ಬೆಂಗಳೂರು: ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಜನ ಸಾಮಾನ್ಯರ ಮೇಲೆ ಎಸಗುತ್ತಿರುವ ದೌರ್ಜನ್ಯ ತಡೆಗಟ್ಟಲು ರೂಪಿಸಲಾಗುತ್ತಿರುವ ಕಾನೂನು ನ್ಯಾಯಾಲಯದಿಂದ ಅನೂರ್ಜಿತಗೊಳ್ಳದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕಾಗಿ ಆರ್ಥಿಕ ಮತ್ತು ಕಾನೂನು ತಜ್ಞರು ಸತತ ಸಮಾಲೋಚನೆಯಲ್ಲಿ ತೊಡಗಿದ್ದು ನಾನಾ ರೀತಿಯ ಅಧ್ಯಯನ ನಡೆಸಲಾಗುತ್ತಿದೆ ಎಂದರು.
ಮೈಕ್ರೋ ಫೈನಾನ್ಸ್ ಗಳ ಹಾವಳಿಯ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ಕಾನೂನು ರಚನೆಯ ಅಧಿಕಾರವನ್ನು ಸಂಪುಟ ಸಭೆ ಮುಖ್ಯಮಂತ್ರಿಗಳಿಗೆ ನೀಡಿದೆ ಎಂದರು.
ಅಕ್ರಮ ಲೇವಾದೇವಿ ತಡೆ ಕಾಯಿದೆ ಸೇರಿದಂತೆ ಚಾಲ್ತಿಯಲ್ಲಿರುವ ಇತರ ಮಸೂದೆಗಳನ್ನು ಜೋಡಿಸಿ ಸುಗ್ರೀವಾಜ್ಞೆಯನ್ನು ಅಂತಿಮಗೊಳಿಸಲು ಹೇಳಲಾಗಿತ್ತು. ಅಧಿಕಾರಿಗಳು ಶೀಘ್ರದಲ್ಲೇ ಎಲ್ಲಾ ರೀತಿಯ ಚರ್ಚೆಗಳನ್ನು ಮುಗಿಸಿ ರಾಜ್ಯಪಾಲರಿಗೆ ರವಾನಿಸಲಿದ್ದಾರೆ ಎಂದರು.
ಈಗಾಗಲೇ ರೂಪಿಸಲಾದ ಕರಡು ಮಸೂದೆಯಲ್ಲಿ ಕೆಲವು ಸೇರ್ಪಡೆ ಮಾಡಲಾಗಿದೆ. ಇನ್ನೂ ಕೆಲವನ್ನು ತೆಗೆಯಲಾಗಿದೆ. ಇದನ್ನು ಜಾರಿಗೊಳಿಸುವ ಹಂತದಲ್ಲಿ ನ್ಯಾಯಾಲಯಕ್ಕೆ ಹೋಗಿ ತಡೆಯಾಗಬಾರದು ಎಂಬ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದರು.




