ಬೆಳಗಾವಿ ಉಪಚುನಾವಣೆ: ಸತೀಶ್ ಜಾರಕಿಹೊಳಿ ಕೈ ಅಭ್ಯರ್ಥಿ

5 years ago

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಇನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ದೆಹಲಿಗೆ ಹೋಗಿ ಬಂದ ನಂತರ ತಮ್ಮ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದರು.

ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಶಾಸಕರು, ಹಿರಿಯ ಮುಖಂಡರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

Leave a Reply