ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅದಿರು ಕಳ್ಳತನ ಮತ್ತು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಭಾರಿ ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ದೋಷಿ ಎಂದು ಪ್ರಕಟಿಸಿದ್ದ ನ್ಯಾಯಾಧೀಶ ಗಜಾನನ ಭಟ್ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.
ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರಿಗೆ ಒಳ ಸಂಚಿನ ಕುರಿತಾದ ಮೊದಲ ಪ್ರಕರಣದಲ್ಲಿ ಐದು ವರ್ಷ ಮತ್ತು ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಅಲ್ಲದೆ ಆದಿರು ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಯ ಜೊತೆಗೆ ಒಟ್ಟು 9 ಕೋಟಿ 60 ಲಕ್ಷ ರೂ ದಂಡ ವಿಧಿಸಿದೆ.
ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ದೋಷಿಗಳು ಎಂದು ನ್ಯಾ. ಸಂತೋಷ್ ಗಜಾನನ ಭಟ್ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿತ್ತು. ಶುಕ್ರವಾರ ಮತ್ತೆ ವಾದ-ಪ್ರತಿವಾದ ನಡೆದ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶನಿವಾರಕ್ಕೆ ಕಾಯ್ದಿರಿಸಿತ್ತು.
ಶುಕ್ರವಾರ ಸಿಬಿಐ ಪರ ವಕೀಲರಾದ ಕೆ.ಎಸ್. ಹೇಮಾ ವಾದ ಮಂಡಿಸಿ, ಆರೋಪಿಗಳು 3,100 ಮೆಟ್ರಿಕ್ ಟನ್ ಅದಿರು ಕಳ್ಳ ಸಾಗಣೆಯಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರಕಾರಕ್ಕೆ ಸುಮಾರು 250 ಕೋಟಿ ರೂ.ನಷ್ಟವಾಗಿದೆ. ಆರೋಪಿಗಳು ದೊಡ್ಡ ಪ್ರಮಾಣದ ಆರ್ಥಿಕ ಅಪರಾಧ ಎಸಗಿದ್ದಾರೆ. ಹೀಗಾಗಿ ಗರಿಷ್ಠ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಮನವಿ ಮಾಡಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸಿದ್ದಾರೆ.
ಅದಿರು ನಾಪತ್ತೆ ಕೇಸ್ನಲ್ಲಿ ಶಾಸಕ ಸತೀಶ್ ಸೈಲ್ ಬೇಲೆಕೇರಿ ಬಂದರಿನ ಉಪ ಸಂರಕ್ಷಣಾಧಿಕಾರಿ ಮಹೇಶ್ ಬಿಳಿಯ, ಲಾಲ್ ವುಹಲ್ ಕಂಪೆನಿಯ ಪ್ರೇಮ್ ಚಂದ್ ಗರ್ಗ್, ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ನ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪೆನಿಯ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪೆನಿಯ ಚೇತನ್ ಬಂಧನಕ್ಕೊಳಗಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಶಾಸಕ ಸ್ಥಾನದ ಅನರ್ಹತೆ?: ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಇದೀಗ ಅನರ್ಹತೆಯ ಭೀತಿ ಎದುರಾಗಿದೆ. ಅಪರಾಧ ಪ್ರಕರಣದಲ್ಲಿ ಇವರಿಗೆ ಗರಿಷ್ಠ ಜೈಲು ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಇವರನ್ನು ಶಾಸನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಬೇಕಾಗುತ್ತದೆ.




