ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮೀ ಹೆಬ್ಬಾಳ್ಕರ್

2 years ago

ಬೆಂಗಳೂರು: ಬೆಳಗಾವಿ ವಿಚಾರವಾಗಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನ ನಡೆಸಲಾಗಿದೆ ಎಂದು ಆಪಾದಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಮನವಿ ಮಾಡಿಕೊಂಡರು.

ನಾನು ಮುಂಬೈ ಪ್ರಾಂತ್ಯ ಅನ್ನೋ ಬದಲು ಬಾಯಿ  ತಪ್ಪಿ ಮಹಾರಾಷ್ಟ್ರ ಎಂದೇ. ಅದನ್ನು ತಪ್ಪಾಗಿ ಯಾರು ಅರ್ಥೈಸಬೇಡಿ. ಸ್ವಾತಂತ್ರ್ಯ ಪೂರ್ವ ಮಹಾರಾಷ್ಟ್ರ ರಾಜ್ಯವೇ ಇರಲಿಲ್ಲ‌ ಎಂದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಕಳೆದ ಭಾನುವಾರ ನಡೆದ ಕನ್ನಡ ಸಮಾವೇಶದ ಉದ್ಘಾಟನಾ ಸಮಾರಂಭದ ವೇಳೆ ಅವರು, ಬಾಯ್ತಪ್ಪಿ ಮುಂಬೈ ಪ್ರಾಂತ್ಯ ಎನ್ನುವ ಬದಲಿಗೆ ಮಹಾರಾಷ್ಟ್ರ  ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಬಿಜೆಪಿ ರಾಜಕೀಯ ಬಣ್ಣ ನೀಡಿ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದಾರೆ.

Leave a Reply