ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏ.12 ರಿಂದ 19 ರ ವರೆಗೆ ಉಮೇದುವಾರರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ನಡೆಯುವುದರಿಂದ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಿಆರ್ ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತ ಮುತ್ತಲಿನ 100 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಏ.12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏ.19 ರ ವರೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಲಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಂಭವವಿರುವುದರಿಂದ ಸೂಕ್ತ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಿದ್ದಾರೆ.
ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ ಅಥವಾ ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳನ್ನು ತೆಗೆದುಕೊಂಡು ತಿರುಗಾಡುವುದು ನಿಷೇಧಿಸಲಾಗಿದೆ.
ಕಾರು, ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. ಐದಕ್ಕಿಂತ ಹೆಚ್ಚು ಜನರು ಗುಂಪು ಗೂಡಿ ತಿರುಗಾಡುವುದು (ಜಿಲ್ಲಾಧಿಕಾರಿಗಳ ಕಛೇರಿಯ ಸಿಬ್ಬಂದಿ ಹೊರತು ಪಡಿಸಿ) ಕೂಡ ನಿಷೇಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನವನ್ನು ಹಾಗೂ ಆ ಅಫೀಸರ್ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.




