ಬೆಂಗಳೂರು: ಈತ ಮೋಸ್ಟ್ ವಾಂಟೆಡ್ ನಕ್ಸಲ್. ಈತನ ಬಂಧನಕ್ಕಾಗಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈತನ ಸುಳಿವು ನೀಡಿದವರಿಗೆ ದೊಡ್ಡ ಪ್ರಮಾಣದ ಬಹುಮಾನ ಕೂಡ ಘೋಷಿಸಿದ್ದರು. ಆದರೂ ಆತ ಯಾರ ಕೈಗೂ ಸಿಕ್ಕಿರಲಿಲ್ಲ. ಆದರೆ, ಈಗ ಬೆಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಕ್ಸಲೈಟ್ ಗೆಳತಿ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ಇಲ್ಲಿಯೇ ನೆಲೆಸಿದ್ದಾರೆ. ಆಕೆಯನ್ನು ನೋಡಲು ಹರಿಯಾಣದಿಂದ ನಗರಕ್ಕೆ ಬಂದಿದ್ದ ಈತನನ್ನು ಸಿಸಿಬಿ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಅಧಿಕಾರಿಗಳು ಬಂಧಿಸಿದ್ದಾರೆ.
ಹರಿಯಾಣ ಮೂಲದ ಅನಿರುದ್ಧ್ ಬಂಧಿತ ನಕ್ಸಲ್ ಆಗಿದ್ದು, ಈತ ಸಿಪಿಐ ಮಾವೋವಾದಿಗಳ ಪರವಾಗಿ ಕೆಲಸ ಮಾಡುತ್ತಿದ್ದ. ಈತನನ್ನು ಎಟಿಸಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಅನಿರುದ್ಧ್ ನಿಷೇಧಿತ ಬರಹಗಳನ್ನು ಸರ್ಕ್ಯೂಲೇಟ್ ಮಾಡುತ್ತಿದ್ದ. ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ. ಬೆಂಗಳೂರಿನ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ. ಈತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ನಿಷೇಧಿತ ನಕ್ಸಲ್ ಸಂಘಟನೆಯಾಗಿರುವ ಸಿಪಿಐ(ಎಂ)ನಲ್ಲಿ ಅನಿರುದ್ಧ್ ತನ್ನನ್ನು ತೊಡಗಿಸಿಕೊಂಡಿದ್ದ. ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಾ ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸುತ್ತಿದ್ದ. ತನ್ನ ಗೆಳತಿ ನೋಡಲು ಮೂರ್ನಾಲ್ಕು ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದ.
ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಸದ್ಯ ಬಂಧಿತನಿಂದ ಎರಡು ಬ್ಯಾಗ್ಗಳು, ಪೆನ್ ಡ್ರೈವ್ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ.
ಈ ವೇಳೆ ಆತನ ಮೇಲೆ ನಿಗಾ ಇಟ್ಟಿದ್ದ ಎಟಿಸಿ ತಂಡ ಅನಿರುದ್ದನನ್ನು ಬಂಧಿಸಿ ಯುಎಪಿಎ ಕಾಯ್ದೆಯಡಿ ಕೇಸ್ ದಾಖಲಿಸಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಯನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.




