ಕೆ.ಎಂ.ಎಫ್ ಅಧ್ಯಕ್ಷರಾಗಿ ಭೀಮಾ ನಾಯಕ್ ಅವಿರೋಧ ಆಯ್ಕೆ

3 years ago

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬದಲಾವಣೆಯ ಬೆನ್ನಲ್ಲೇ ಕರ್ನಾಟಕ ಹಾಲು ಒಕ್ಕೂಟ (ಕೆ.ಎಂ.ಎಫ್)ದ ಅಧ್ಯಕ್ಷರ ಬದಲಾವಣೆ ಕೂಡ ನಡೆದಿದೆ ಮಾಜಿ ಶಾಸಕ ಭೀಮ ನಾಯಕ್ ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕೆಎಂಎಫ್ ನ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷ ಸ್ಥಾನ ತೊರೆಯುವಂತೆ ಯಾರೂ ತಮಗೆ ಹೇಳಿರಲಿಲ್ಲ. ಆದರೆ ಸರ್ಕಾರ ಬದಲಾವಣೆಯಾಗಿದೆ ಎಂದು ತಾವು ಈ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಹೀಗಾಗಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನದ ಆಯ್ಕೆ ಬಯಸಿ ಮಾಜಿ ಶಾಸಕ ಭೀಮಾ ನಾಯಕ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣೆ ಸಮಯದಲ್ಲಿ ಹಾಜರಿದ್ದ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕರ್ನಾಟಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಭೀಮಾನಾಯ್ಕ್ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಿ ಒಕ್ಕೂಟವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ರೈತರ ಪರವಾಗಿ ಒಕ್ಕೂಟ ಕಾರ್ಯನಿರ್ವಹಿಸಬೇಕು ಎಂದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯ ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೈನುಗಾರಿಕೆಯ ಪಿತಾಮಹ ವರ್ಗಿಸ್ ಕುರಿಯನ್ ಅವರ ಪುತ್ಥಳಿಗೆ ಸಹಕಾರ ಸಚಿವ ರಾಜಣ್ಣ ಹಾಗೂ ಪಶು ಸಂಗೋಪನೆ ಇಲಾಖೆ ಸಚಿವ ವೆಂಕಟೇಶ್, ಅರಸೀಕೆರೆ ಶಾಸಕ ಶಿವಲಿಂಗಗೌಡ ಅವರ ಜೊತೆಗೆ ತೆರಳಿದ ಭೀಮಾ ನಾಯಕ್ ಹೂ ಮಾಲೆ ಹಾಕಿ ನಮಿಸಿದರು. ಈ ಸಂಧರ್ಭದಲ್ಲಿ ಶುಭ ಕೋರಿದ ಎಲ್ಲಾ ಅಭಿಮಾನಿಗಳಿಗೂ ಹಾಗೂ ಕೆ.ಎಂ.ಎಫ್ ನ ಸರ್ವ ಸದಸ್ಯರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದರು.

Leave a Reply