ಬೆಂಗಳೂರು: ಭೀಮಣ್ಣ ಖಂಡ್ರೆಯವರೊಬ್ಬ ಹುಟ್ಟು ಹೋರಾಟಗಾರರು. ಮಹಾತ್ಮ ಗಾಂಧಿಯವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯೂ ಸೇರಿದಂತೆ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವುರು, ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿ, ಕರ್ನಾಟಕ ಏಕೀಕರಣದಲ್ಲಿ ಸಹ ಭಾಗವಹಿಸಿದ್ದರು. ಜನಪರವಾದ ಹೋರಾಟಗಾರ ಎಂದೇ ಗುರುತಿಸಿಕೊಂಡಿದ್ದ ಅವರು ಅನ್ಯಾಯವಾದ ಕಡೆಗೆಲ್ಲಾ ತೆರಳಿ ನ್ಯಾಯದ ಪರವಾಗಿ ಧ್ವನಿ ಎತ್ತಿದವರು ಎಂದರು.
ಬೀದರ್ ಇಂದು ಕರ್ನಾಟಕದಲ್ಲಿ ಉಳಿದಿದ್ದರೆ ಅದು ಭೀಮಣ್ಣ ಖಂಡ್ರೆ ಅವರು ಏಕೀಕರಣಕ್ಕಾಗಿ ಹೋರಾಟ ಮಾಡಿದ್ದರ ಫಲ. ಅವರು ಕೇವಲ ರಾಜಕಾರಣಿಯಾಗಿರದೇ ಸಮಾಜಸೇವಕರೂ ಆಗಿದ್ದರು. ದೀರ್ಘ ಕಾಲ ಸಮಾಜ ಸೇವೆಯಲ್ಲಿ ತೊಡಗಿದ್ದರು. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸುವ ಛಾತಿ ಅವರಲ್ಲಿತ್ತು ಎಂದರು.
ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ಸಂತಸದಲ್ಲಿ ಭಾಗಿಯಾಗಿದ್ದೆ. ಅವರ ಬದುಕಿನ ರೀತಿ ಯುವಜನರಿಗೆ ದಾರಿದೀಪ. ಭೀಮಣ್ಣ ಖಂಡ್ರೆ ಅವರ ಸಾವಿನಿಂದ ದುಃಖದಲ್ಲಿರುವ ಎಲ್ಲರಿಗೂ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.




