ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ಆರೋಪದ ಸುಳಿಗೆ ಸಿಲುಕಿರುವ ನಿಗಮದ ಅಧ್ಯಕ್ಷ ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೋವಿ ಅಭಿವೃದ್ಧಿ ನಿಗಮದಿಂದ ಫಲಾನುಭವಿ ಮಹಿಳೆಯರಿಗೆ ಜಮೀನು ಖರೀದಿಸಲು ನೀಡುವ 20 ಲಕ್ಷ ರೂಪಾಯಿ ಸಹಾಯಧನಕ್ಕೆ 5 ಲಕ್ಷ ರೂಪಾಯಿ ಕಮಿಷನ್ ನೀಡಬೇಕು ಎಂದು ಅಧ್ಯಕ್ಷ ರವಿಕುಮಾರ್ ಬೇಡಿಕೆ ಮಂಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಪಲಾನುಭವಿಗಳೊಂದಿಗೆ ರವಿಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ಸಂಚಲನ ಸೃಷ್ಟಿಸಿತ್ತು. ಈ ಹಿನ್ನಲೆಯಲ್ಲಿ ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆದರೆ ತಮ್ಮ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿರುವ ಅವರು ನಿಗಮದಲ್ಲಿ ಆರ್ಥಿಕ ಶಿಸ್ತು ಕಾಪಾಡಲು ತಾವು ಕೈಕೊಂಡ ಕೆಲವು ಕಠಿಣ ನಿರ್ಧಾರಗಳಿಂದ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಇದನ್ನು ಸಹಿಸದ ಕೆಲವರು ತಮ್ಮ ವಿರುದ್ಧ ಪಿತೂರಿ ಮಾಡಿ ಕಟ್ಟುಕಥೆ ಸೃಷ್ಟಿಸಿದ್ದಾರೆ ಎಂದು ಆಪಾದಿಸಿದ್ದಾರೆ.
ರಾಜೀನಾಮೆ ನೀಡುವ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.
ಮುಖ್ಯಮಂತ್ರಿ ಸೂಚಿಸಿದರೆ, ನಾನು ಶೀಘ್ರದಲ್ಲೇ ಬೆಂಗಳೂರಿಗೆ ಹೋಗಿ ನನ್ನ ರಾಜೀನಾಮೆ ನೀಡುತ್ತೇನೆ” ಎಂದರು.
ನಿಗಮದ ಅಧ್ಯಕ್ಷನಾದ ನಂತರ ನಾನು ಯಾರ ಬಳಿಯೂ ಕಮೀಷನ್ ಪಡೆದಿಲ್ಲ. ಯಾರಿಗೂ ಕೊಟ್ಟಿಲ್ಲ. ಎಐ ತಂತ್ರಜ್ಞಾನ ಬಳಸಿಕೊಂಡು ನನ್ನ ಮಾತುಗಳನ್ನು ತಿರುಚಲಾಗಿದೆ ಎಂದರು.
ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಈ ಪಿತೂರಿಯಲ್ಲಿ ನಿಗಮದ ಅಧಿಕಾರಿಗಳ ಪಾತ್ರವನ್ನು ಅಲ್ಲಗಳೆಯಲಾಗದು. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಏನೆಂಬುದನ್ನು ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸುವಂತೆ ಮನವಿ ಮಾಡಲಿದ್ದೇನೆ ಎಂದರು.
ಈ ಹಿಂದೆ ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹು ದೊಡ್ಡ ಹಗರಣವೇ ನಡೆದಿತ್ತು. ಅಧ್ಯಕ್ಷ ಸ್ಥಾನ ಮುಳ್ಳಿನ ಕುರ್ಚಿ ಎಂಬ ಅರಿವು ನನಗಿತ್ತು. ಭ್ರಷ್ಟಾಚಾರ ತಡೆಯಲು ಬಿಗಿ ಕ್ರಮಗಳನ್ನು ಅನುಸರಿಸಿದ್ದೆ. ಈ ಬೆಳವಣಿಗೆಗಳನ್ನು ಸಹಿಸಿಕೊಳ್ಳಲಾಗದ ಕೆಲವರು ಸಂಚು ರೂಪಿಸಿದ್ದಾರೆ ಎಂದರು.




