ಬಳ್ಳಾರಿ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಚೇರಿಯ ಮುಂಭಾಗ ನೂತನವಾಗಿ ನಿರ್ಮಿಸಲಾಗುತ್ತಿರುವ ಗ್ರಾಹಕರ ಮಧ್ಯಸ್ಥಿಕೆ ಕೇಂದ್ರ ಮತ್ತು ಕಚೇರಿಯ ಮೊದಲನೇ ಮಹಡಿ ಕಟ್ಟಡ ನಿರ್ಮಾಣ ಸೇರಿದಂತೆ ಒಟ್ಟು ರೂ.53.82 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಶಶಿಕಲಾ ಮಾರ್ಲಾ, ಹಿರಿಯ ವಕೀಲರಾದ ಹೆಚ್.ಎಂ.ಅಂಕಲಯ್ಯ, ಬಿ.ವೆಂಕಟೇಶ್ವರ ಪ್ರಸಾದ್, ಮಲ್ಲಿಕಾರ್ಜುನ, ಪಿ.ಸತ್ಯ ನಾರಾಯಣ ಸೇರಿದಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಭೂಸೇನಾ ನಿಗಮದ ಸಿಬ್ಬಂದಿ ಹಾಜರಿದ್ದರು.




