ಬೆಳಗಾವಿ: ಬೀದರ್ ನಗರಕ್ಕೆ ಉಡಾನ್ ಯೋಜನೆಯಡಿ ಕಲ್ಪಿಸಲಾಗಿದ್ದ ನಾಗರಿಕ ವಿಮಾನಯಾನ ಸೇವೆ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಕಾರಣ, ಜನರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 15 ಕೋಟಿ ರೂ. ನೀಡಿ ಮರು ಆರಂಭ ಮಾಡಲಾಗಿದೆ. ಆದರೆ ಬೇರೆ ಕಡೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 1000 ಕೋಟಿ ವೆಚ್ಚ ಮಾಡಲಾಗಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸದನದಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 1960ರ ದಶಕದಿಂದಲೂ ವಿಮಾನ ನಿಲ್ದಾಣವಿದ್ದು, ಕೇವಲ 20 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ಸಿದ್ಧಪಡಿಸಿ ವಿಮಾನ ಯಾನ ನಡೆಯುತ್ತಿತ್ತು. ಆದರೆ ಉಡಾನ್ ಯೋಜನೆ 3 ವರ್ಷ ಆದ ಬಳಿಕ ಸ್ಥಗಿತಗೊಂಡಿತ್ತು ಎಂದರು.
ಬೀದರ್ ನಾಗರಿಕ ವಿಮಾನ ಯಾನ ಸೇವೆಗಾಗಿ ಟರ್ಮಿನಲ್ ಮತ್ತು ಅನುದಾನ ಸೇರಿ ಒಟ್ಟು ವೆಚ್ಚ ಮಾಡಿರುವುದು 35 ಕೋಟಿ ರೂ. ಮಾತ್ರ ಎಂದು ಈಶ್ವರ ಖಂಡ್ರೆ ಸದನಕ್ಕೆ ಸ್ಪಷ್ಟನೆ ನೀಡಿದರು.



