ಬೆಂಗಳೂರು: ರಾಜಕೀಯ ಕಾರಣಕ್ಕೆ ಮಾಧ್ಯಮಗಳಲ್ಲಿ ದೊಡ್ಡ ಜಾಹೀರಾತು ನೀಡುವ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಿಯೋಗ ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿಕೆ ಮಾಡಿತು.

ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ರಾಜ್ಯಪಾಲರಿಗೆ ನಿಯೋಗ ಮನವಿ ಮಾಡಿತು.

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಆರೋಪಿಸಿದೆ.

‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ. ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ ಎಂದಿದೆ.





