ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಟಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯ್ತಿ ಇದೆ. ಆ ರಿಯಾಯಿತಿ ನಂತರ ತೆರಿಗೆ ಕಟ್ಟಬೇಕೆಂಬ ಪದ್ಧತಿ ಇದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ವಿಚಾರದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿ ಸಣ್ಣ ಬೀದಿ ಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರೆಸಿ ಅವರು ವ್ಯಾಪಾರ ಮುಚ್ಚುವ ಪರಿಸ್ಥಿತಿಗೆ ತಂದಿರುವುದು ಯಾರೂ ಕೂಡ ಒಪ್ಪಲು ಸಾಧ್ಯವಿಲ್ಲ.
ಸಂಬಂಧಪಟ್ಟ ಸಣ್ಣ ವ್ಯಾಪಾರಿಗಳ ಪ್ರತಿನಿಧಿಗಳನ್ನು ಕರೆದು ಚರ್ಚೆ ಮಾಡಿ ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ ಅದೇ ರೀತಿ ಅವರಿಗೂ ಸಹಾಯ ಮಾಡಬೇಕು.
ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಕೂಡ ಅನ್ವಯಿಸಬೇಕೆಂದು ಆಗ್ರಹ ಮಾಡುತ್ತೇನೆ.
ಮುಖ್ಯಮಂತ್ರಿ Siddaramaiah ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ತರಿಗೆ ಪರಿಹಾರ ಒದಗಿಸಬೇಕೆಂದು ನನ್ನ ಆಗ್ರಹ.
ರಾಜ್ಯದಲ್ಲಿ ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೇ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪರಿಹಾರ ಒದಗಿಸಬೇಕು.
– ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ




