ಕಲಬುರ್ಗಿ: ಸಂವಿಧಾನದ ಕಲಂ 371 (J ) ಜಾರಿಗೆ ಬಂದು ಹತ್ತು ವರ್ಷಗಳಾದ ಈ ಸಂದರ್ಭದಲ್ಲಿ ಕಲಬುರಗಿಯಲ್ಲಿ ಸೆಪ್ಟೆಂಬರ್ 17 ರಂದು ದಶಮಾನೋತ್ಸವ ಏರ್ಪಡಿಸಲಾಗಿದೆ. ಜೊತೆಗೆ ಹತ್ತು ವರ್ಷಗಳ ನಂತರ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು ಈ ಭಾಗದ ಸಮಗ್ರ ಅಭಿವೃದ್ದಿಗೆ ನೀಲನಕ್ಷೆ ತಯಾರಿಸಲು ಸೂಚಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ, ಸಚಿವ ಸಂಪುಟದ ಸಭೆ ಹಾಗೂ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕುರಿತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಈಗಾಗಲೇ ಈ ಬಗ್ಗೆ ಎರಡು ಮೂರು ಸಭೆ ನಡೆಸಿರುವುದರಿಂದ ಕಾರ್ಯಕ್ರಮದ ಕುರಿತು ಸ್ಪಷ್ಟತೆ ದೊರೆತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೈಗಾರಿಕೆ ನೀತಿ ರೂಪಿಸುವುದು ಸೇರಿದಂತೆ ಉದ್ಯೋಗ ಸೃಷ್ಠಿಸಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಇಲ್ಲಿನ ಸಂಘ ಸಂಸ್ಥೆಗಳು ಅಭಿವೃದ್ದಿ ಕಾಮಗಾರಿಗಳ ಕುರಿತು ಈಗಾಗಲೇ ಶಾಸಕರಿಗೆ ಬೇಡಿಕೆ ಸಲ್ಲಿಸಿದ್ದಾರೆ. ಬೇಡಿಕೆ ಹಾಗೂ ಸಲಹೆಗಳ ಜೊತೆಗೆ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಪರೀಶೀಲನೆ ನಡೆಸಿ, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಯಾವ ವಿಷಯಗಳು ಸಚಿವ ಸಂಪುಟದ ಚರ್ಚೆಗೆ ತರಬೇಕು ಎಂದು ನಿರ್ಣಯ ಕೈಗೊಳ್ಳಲಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಇತರೆ ಜಿಲ್ಲೆಗಳ ಜನಪ್ರತಿನಿಧಿಗಳು, ಶಾಸಕರು ಹಾಗೂ ಸಂಘ ಸಂಸ್ಥೆಗಳಿಂದಲೂ ಬೇಡಿಕೆ ಪಟ್ಟಿಯನ್ನು ಸಂಗ್ರಹಿಸಲು ಕಲಬುರಗಿಯ ವಿಭಾಗೀಯ ಆಯುಕ್ತರಿಗೆ ಸೂಚಿಸಲಾಗಿದೆ. ಇನ್ನೂ ಒಂದು ವಾರ ಕಾಲಾವಕಾಶ ಇದ್ದು ಬೇಡಿಕೆಗಳನ್ನು ಕೂಲಂಕುಶವಾಗಿ ಪರಿಶೀಲಿಸಲು ಸೂಚಿಸಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಆರ್ಟಿಕಲ್ 371 (J) ಜಾರಿಗೆ ಬಂದ ನಂತರ ಈ ಭಾಗದ ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯಾಗಿದೆ. ಪ್ರಸಕ್ತ ವರ್ಷದಲ್ಲಿ ಮೀಸಲಾತಿ ಸೌಲಭ್ಯದಲ್ಲಿ 7,000 ವಿದ್ಯಾರ್ಥಿಗಳು ಮೆಡಿಕಲ್ ಸೀಟ್, 1,388 ವಿದ್ಯಾರ್ಥಿಗಳು ಡೆಂಟಲ್, 22,200 ವಿದ್ಯಾರ್ಥಿಗಳು ಇಂಜಿನಿಯರಿಂಗ್, 3,448 ಅಭ್ಯರ್ಥಿಗಳು ISMH, 3,800 ಅಭ್ಯರ್ಥಿಗಳು ಕೃಷಿ ಹಾಗೂ 1,593 ಅಭ್ಯರ್ಥಿಗಳು ಫಾರ್ಮಸಿ ಪದವಿಗಳಿಗೆ ಸೀಟ್ ಪಡೆದುಕೊಂಡಿದ್ದಾರೆ ಎಂದರು.
ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಿ ದೇಶದ ಸಂವಿಧಾನದ ವಿಶಿಷ್ಟತೆ ಬಗ್ಗೆ ವಿಶ್ವದ ಜನರಿಗೆ ತಿಳಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ 113 ಕಿ.ಮೀ ಉದ್ದದ ಈ ಮಾನವ ಸರಪಳಿಯಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಮಾಜದ ಎಲ್ಲರೂ ಭಾಗವಹಿಸಬೇಕು. ಬೀದಿ ನಾಟಕ, ಸಾಂಸ್ಕೃತಿಕ ಕಲೆ, ಜಾನಪದ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಸಾವಿರಾರು ಕಿ.ಲೋ ಹಾದಿಯಲ್ಲಿ ದಾರಿಯುದ್ದಕ್ಕೂ ನಡೆಯಲಿವೆ ಎಂದರು.
ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಜನರ ನಿರೀಕ್ಷೆಯಂತೆ ಪ್ರದೇಶ ಅಶೋತ್ತರಗಳನ್ನು ಈಡೇರಿಸುವ ಪ್ರಮುಖ ಸಭೆ ಇದಾಗಿದೆ. ಸಿ.ಎಂ. ಸೇರಿ ಇಡೀ ಸಂಪುಟ ಸದಸ್ಯರು, ಹಿರಿಯ ಅಧಿಕಾರಿಗಳು ಸೇರಿನಂತೆ ಇಡೀ ಸರ್ಕಾರವೇ ಕಲಬುರಗಿಯತ್ತ ಬರುವುದರಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಬೇಕು. ಅತಿಥಿ ದೇವೋಭವ ಎಂಬಂತೆ ಬಂದವರಿಗೆ ಶಿಷ್ಠಾಚಾರದಂತೆ ಉಪಚಾರ ಮಾಡಬೇಕು. ಒಟ್ಟಾರೆ ಸಚಿವ ಸಂಪುಟ ಸಭೆ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.




